Home ಟಾಪ್ ಸುದ್ದಿಗಳು ಈ ವಾರದಲ್ಲಿ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ: ಸಿದ್ದರಾಮಯ್ಯ ಘೋಷಣೆ

ಈ ವಾರದಲ್ಲಿ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬೆಳೆ ಪರಿಹಾರದ ಮೊದಲ ಕಂತು ಈ ವಾರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಗಣರಾಜ್ಯೋತ್ಸವದ ಸಂದೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಈಗಾಗಲೇ ಬೆಳೆ ಪರಿಹಾರ 2,000 ರೂ. ಘೋಷಣೆಯಾಗಿದ್ದು, ಈವರೆಗೆ 550 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಈ ವಾರದಲ್ಲಿ ಮೊದಲ ಕಂತಿನ ಪರಿಹಾರ ತಲುಪಲಿದೆ ಎಂದರು.

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದರು.

Join Whatsapp
Exit mobile version