ಮೊದಲು ಜಿಲ್ಲೆಯಲ್ಲಿ ಸಾಮರಸ್ಯದ ಸಮಾವೇಶ ಮಾಡಿ, ನಂತರ ಹೂಡಿಕೆದಾರರ ಸಮಾವೇಶ ಮಾಡಬಹುದು: ಯು.ಟಿ.ಖಾದರ್

Prasthutha|

►ಕಾರ್ ಸ್ಟೀಟ್ ಕಾಲೇಜಿನ ಹೆಣ್ಮಕ್ಕಳಿಗೆ ಅಗೌರವ ತೋರಿರುವುದು ಸಹಿಸಲು ಸಾಧ್ಯವಿಲ್ಲ

- Advertisement -

ಮಂಗಳೂರು: ಹಿಜಾಬ್ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ. ಇದೆಲ್ಲಾ ನಡೆಯುತ್ತಿದ್ದರೂ ಜಿಲ್ಲಾಡಳಿತ ಏನು ಮಾಡುತ್ತಿದೆ ಎಂದು ವಿಧಾನ ಸಭಾ ವಿಪಕ್ಷ ಉಪ ನಾಯಕ ಯು ಟಿ ಖಾದರ್ ಪ್ರಶ್ನಿಸಿದ್ದಾರೆ.

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಹೆಣ್ಮಕ್ಕಳಿಗೆ ಈ ರೀತಿ ಅಗೌರವ ತೋರಿಸುವುದು ಸರಿಯಾ.? ಹುಡುಗರು ದಬ್ಬಾಳಿಕೆ ಮಾಡಿದಾಗ ಪ್ರಾಂಶುಪಾಲರು, ಆಡಳಿತ ಮಂಡಳಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.  ಯಾರು ಭಯ ಮತ್ತು ಗೊಂದಲದ ವಾತಾವರಣ ಸೃಷ್ಟಿಸುತ್ತಾರೋ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ ಒತ್ತಾಯಿಸಿದರು.

- Advertisement -

ಕಾರ್ ಸ್ಟೀಟ್ ಕಾಲೇಜಿನಲ್ಲಿ ನಡೆದ ಹಿಜಾಬ್ ಗಲಾಟೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದು ವಿಧಾನ ಸಭಾ ವಿಪಕ್ಷ ಉಪ ನಾಯಕ ಯು ಟಿ ಖಾದರ್ ಆಗ್ರಹಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಇಂತಹ ಸಮಯದಲ್ಲಿ ರಾಜ್ಯ ಸರಕಾರ ಮೊದಲು ಸಾಮರಸ್ಯದ ಸಮಾವೇಶ ನಡೆಸಲಿ, ಆಮೇಲೆ ಹೂಡಿಕೆದಾರರ ಸಮಾವೇಶ ನಡೆಸಲಿ ಎಂದು ಯು.ಟಿ. ಖಾದರ್ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದರು.

  ರಾಜ್ಯ ಸರಕಾರದ ಬಜೆಟ್ ರಾಜ್ಯವನ್ನು ಹಿಂದಕ್ಕೆ ತಳ್ಳುವಂತಿದೆ. ಈ ಬಾರಿಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ, ದಲಿತ ವರ್ಗವನ್ನು ಕಡೆಗಣಿಸಲಾಗಿದೆ. ಕರಾವಳಿಯಲ್ಲಿ ಆಡಳಿತ ಪಕ್ಷದ ಶಾಸಕರ ಸಂಖ್ಯೆ ಹೆಚ್ಚಿದ್ದರೂ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ. ಒಟ್ಟಿನಲ್ಲಿ ರಾಜ್ಯ ಸರಕಾರವು ಆರ್ಥಿಕವಾಗಿ, ರಾಜಕೀಯವಾಗಿ ಅಂಗವಿಕಲವಾಗಿದೆ ಎಂದು ವ್ಯಂಗ್ಯವಾಡಿದರು.

Join Whatsapp