ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಿತು.
ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್ಎಸ್ಟಿ ಮತ್ತು ಪೊಲೀಸ್ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದು, ಈ ಸಂಬಂಧ 2,172 ಪ್ರಕರಣಗಳು ದಾಖಲಾಗಿವೆ. ಅಬಕಾರಿ ಇಲಾಖೆ 3098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ.
ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4789 ಪ್ರಕರಣ, ಎನ್ಡಿಪಿಎಸ್ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕಾದ ಮಾದನಾಯನಹಳ್ಳಿ ಬಳಿ 4.80 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ.