ದಕ್ಷಿಣ ಅಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ| ಟಾಸ್‌ ಗೆದ್ದ ಭಾರತ

Prasthutha|

ತಿರುವನಂತಪುರಂ: ದಕ್ಷಿಣ ಅಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದ ಟಾಸ್‌ ಭಾರತದ ಪಾಲಾಗಿದ್ದು, ಆಫ್ರಿಕಾ ಪಡೆಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿರಲಿದೆ. ಎಂದು ಕ್ಯೂರೇಟರ್‌ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ  ತಿರುವನಂತಪುರಂನ ತಿರುವನಂತಪುರಂನ ಗ್ರೀನ್‌ ಫೀಲ್ಡ್‌ ಸ್ಟೇಡಿಯಂನಲ್ಲಿ ʻರನ್‌ ಹೊಳೆʼ ಹರಿಯುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

- Advertisement -

ಆದರೆ ಪಂದ್ಯ ಆರಂಭವಾಗುವ ಮುನ್ನವೇ ಭಾರತ ತಂಡಕ್ಕೆ ಹಿನ್ನಡೆಯಾಗಿದ್ದು, ಪ್ರಮುಖ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಬುಮ್ರಾ ಜೊತೆಗೆ ಸ್ಪಿನ್ನರ್‌ ಯಜುವೇಂದ್ರ ಚಹಾಲ್‌ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಇವರಿಬ್ಬರ ಬದಲಿಗೆ ರಿಷಭ್‌ ಪಂತ್‌ ಮತ್ತು ಅರ್ಷ್‌ದೀಪ್‌ ಸಿಂಗ್‌ ಸ್ಥಾನ ಪಡೆದಿದ್ದಾರೆ.

ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಮತ್ತು ಭುವನೇಶ್ವರ್‌ ಕುಮಾರ್‌ಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಲು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

- Advertisement -

ಪ್ಲೇಯಿಂಗ್‌ ಇಲೆವೆನ್‌

ಭಾರತ XI : ರೋಹಿತ್ ಶರ್ಮಾ(ನಾಯಕ) , ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಅಕ್ಷರ್ ಪಟೇಲ್, ಆರ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್

ದಕ್ಷಿಣ ಆಫ್ರಿಕಾ XI: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್‌ ಕೀಪರ್‌), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ದಕ್ಷಿಣ ಆಫ್ರಿಕಾ ವಿರುದ್ಧ ತಾಯ್ನೆಲದಲ್ಲಿ ಭಾರತ ಇದುವರೆಗೂ ಟಿ20 ಸರಣಿ ಗೆದ್ದಿಲ್ಲ. ಕಳೆದೆರಡು ಸರಣಿಗಳು ಡ್ರಾದಲ್ಲಿ ಕೊನೆಗೊಂಡಿದ್ದವು. ಉಭಯ ತಂಡಗಳು ಈವರೆಗೂ ಒಟ್ಟು 20ಟಿ0 ಪಂದ್ಯಗಳನ್ನಾಡಿದ್ದು, 11 ಭಾರತ ಮತ್ತು 8 ಪಂದ್ಯಗಳಲ್ಲಿ ಆಫ್ರಿಕಾ ಜಯಭೇರಿ ಬಾರಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿತ್ತು

Join Whatsapp