ಸುಪ್ರೀಂ ಕೋರ್ಟ್’ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತಿಮಾ ಬೀವಿ ನಿಧನ

Prasthutha|

ಕೊಲ್ಲಂ: ಸುಪ್ರೀಂ ಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶೆ ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲೆ ಫಾತಿಮಾ ಬೀವಿ ಅವರು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

- Advertisement -


ಅವರಿಗೆ 96 ವರ್ಷ ವಯಸ್ಸಾಗಿತ್ತು.


ಕೇರಳ ಆರೋಗ್ಯ ಸಚಿವೆವೀಣಾ ಜಾರ್ಜ್ ಅವರು ನ್ಯಾಯಮೂರ್ತಿ ಬೀವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ನ್ಯಾಯಮೂರ್ತಿ ಬೀವಿ ಅವರ ನಿಧನವು ಅತ್ಯಂತ ನೋವಿನಿಂದ ಕೂಡಿದೆ ಎಂದು ಹೇಳಿದ್ದಾರೆ. ನ್ಯಾಯಮೂರ್ತಿ ಬೀವಿ ಅವರು ಸುಪ್ರೀಂ ಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶರಾಗಿ ಮತ್ತು ತಮಿಳುನಾಡು ರಾಜ್ಯಪಾಲರಾಗಿ ತಮ್ಮ ಛಾಪು ಮೂಡಿಸಿದ್ದಾರೆ ಎಂದು ಸಚಿವರು ಹೇಳಿದರು.



Join Whatsapp