Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.


ರಾಯಚೂರು ಜಿಲ್ಲೆಯಲ್ಲಿ 5 ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿದೆ. ಝೀಕಾ ವೈರಸ್ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.


ಝೀಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಝೀಕಾ ವೈರಸ್ ಸೋಂಕಿನ ಬಗ್ಗೆ ಸಂಜೆ ಪ್ರತ್ಯೇಕ ಗೈಡ್ ಲೈನ್ಸ್ ರಿಲೀಸ್ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದ್ದಾರೆ.

Join Whatsapp
Exit mobile version