ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ.
ಹಾಸನ ಮೂಲದ ಕಿಶೋರ್(19), ತನ್ಮಯ್(18) ಮೃತರು. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು. ಇಬ್ಬರ ಶವಗಳನ್ನು ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.