ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಾವು

Prasthutha|

ಮಂಗಳೂರು: ನಗರದ ಅಳಿವೆಬಾಗಿಲು ನದಿಯಲ್ಲಿ ಮೀನುಗಾರರೊಬ್ಬರು ಬಲೆ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.
ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ತಿಳಿದುಬಂದಿದೆ.

- Advertisement -

ಇವರು ಅಳಿವೆಬಾಗಿಲಿನ ಸಮೀಪ ಮೀನು ಹಿಡಿಯುತ್ತಿದ್ದ ವೇಳೆ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಎಷ್ಟೇ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp