ನವದೆಹಲಿ: ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಲೋಕ ಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಐವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಐವರನ್ನು ಅಮಾನತುಗೊಳಿಸುವ ಗದ್ದಲದ ನಡುವೆಯೇ ನಿರ್ಣಯವನ್ನು ಮಂಡಿಸಿದರು.
ಸದನ ಮತ್ತು ಈ ಪೀಠದ ಅಧಿಕಾರವನ್ನು ಸಂಪೂರ್ಣವಾಗಿ ಕಡೆಗಣಿಸಿ ಟಿಎನ್ ಪ್ರತಾಪನ್, ಹೈಬಿ ಈಡನ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರ ದುರ್ವರ್ತನೆಗಾಗಿ ಸದನದ ಸೇವೆಯಿಂದ ಅಮಾನತುಗೊಳಿಸಲಾಗಿದೆ.