ಪಂಚ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗುತ್ತಿವೆ: ರಾಜ್ಯಪಾಲ ಗೆಹ್ಲೋಟ್

Prasthutha|

- Advertisement -

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

- Advertisement -

ರಾಜ್ಯದ ಜನತೆಗೆ ರಾಜ್ಯಪಾಲರ ಸಂದೇಶ:

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ ಎಂದು ತಿಳಿಸಿದರು.

ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ ಪ್ರಮುಖ ದೇಶಗಳಲ್ಲಿ 5 ನೇ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು 100% ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಭಾರತದ ಜನರ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.



Join Whatsapp