ಕೆನಡಾ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣ

Prasthutha|

ಒಟ್ಟಾವಾ: ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕೆನಡಾದ ಒಂಟಾರಿಯೊ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಮೃತರನ್ನು ಹರ್‍ ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‍ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್ ಮಾಡಿ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದ್ದಾರೆ. ಟೊರೆಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತ್ರಸ್ತರ ಸ್ನೇಹಿತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ತಿಳಿಸಿದರು.

ಇನ್ನು ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಭಾರತೀಯ ರಾಯಭಾರಿ ತಂಡವು ಸಂಪರ್ಕದಲ್ಲಿದೆ ಎಂದು ಟ್ವೀಟ್ ಮಾಡಿ ತಿಳಿಸಿದೆ. ಅಪಘಾತದ ಕುರಿತು ತನಿಖೆ ನಡೆಯುತ್ತಿದೆ ಎಂದು ಕ್ವಿಂಟೆ ವೆಸ್ಟ್ ಒಂಟಾರಿಯೊ ಪ್ರಾಂತೀಯ ಪೊಲೀಸರು ತಿಳಿಸಿದ್ದಾರೆ

Join Whatsapp