ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಐವರಿಂದ ಪ್ರಮಾಣವಚನ ಸ್ವೀಕಾರ: ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿಕೆ

Prasthutha|

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳಿಗೆ ಸೋಮವಾರ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಪ್ರಮಾಣ ವಚನ ಬೋಧಿಸಿದರು.

- Advertisement -


ನ್ಯಾ. ಮಿತ್ತಲ್ (ರಾಜಸ್ಥಾನ ಹೈಕೋರ್ಟ್ ನ ಹಾಲಿ ಮುಖ್ಯ ನ್ಯಾಯಮೂರ್ತಿ), ನ್ಯಾ. ಸಂಜಯ್ ಕರೋಲ್ (ಪಾಟ್ನಾ ಹೈಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ), ನ್ಯಾ. ಪಿ ವಿ ಸಂಜಯ್ ಕುಮಾರ್ (ಮಣಿಪುರ ಹೈಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ), ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ (ಪಾಟ್ನಾ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ) ಹಾಗೂ ನ್ಯಾ. ಮನೋಜ್ ಮಿಶ್ರಾ (ಅಲಹಾಬಾದ್ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ) ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಂಡರು.


ಈ ಐವರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪದೋನ್ನತಿ ನೀಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಡಿಸೆಂಬರ್ 13ರಂದು ಶಿಫಾರಸು ಮಾಡಿತ್ತು. ಈ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿದೆ. ನ್ಯಾಯಾಲಯದ ಒಟ್ಟು ನ್ಯಾಯಮೂರ್ತಿ ಹುದ್ದೆಗಳಲ್ಲಿ ಕೇವಲ ಎರಡು ಮಾತ್ರ ಖಾಲಿ ಉಳಿದಿವೆ.

- Advertisement -

Join Whatsapp