ರಾಮ ಮಂದಿರ ಪರ ತೀರ್ಪು ನೀಡಿದ್ದ ಐವರು ನ್ಯಾಯಾಧೀಶರಿಗೆ ʼಪ್ರಾಣ ಪ್ರತಿಷ್ಠಾಪನೆʼ ಕಾರ್ಯಕ್ರಮಕ್ಕೆ ಆಹ್ವಾನ

Prasthutha|

ನವದೆಹಲಿ: ರಾಮ ಮಂದಿರ ಪರ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ 2019ರ ಪೀಠದಲ್ಲಿದ್ದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ ‘ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

- Advertisement -


2019ರಲ್ಲಿ ಅಯೋಧ್ಯೆ ರಾಮ ಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಾಧೀಶರಾದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಮಾಜಿ ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಝೀರ್, ಅಶೋಕ್ ಭೂಷಣ್ ಹಾಗೂ ಎಸ್ ಎ ಬೋಬ್ಡೆ ಅವರನ್ನು ಆಹ್ವಾನಿಸಲಾಗಿದೆ.
ಆಹ್ವಾನಿತರಲ್ಲಿ ಮಾಜಿ ಮುಖ್ಯ ನ್ಯಾಯಾಧೀಶರು, ನ್ಯಾಯಾಧೀಶರು, ಉನ್ನತ ವಕೀಲರು ಒಳಗೊಂಡು 50 ನ್ಯಾಯ ಶಾಸ್ತ್ರಜ್ಞರನ್ನು ಆಹ್ವಾನಿಸಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಮಾಜಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಕೂಡ ಆಹ್ವಾನಿತರಲ್ಲಿ ಸೇರಿದ್ದಾರೆ.


ಚಂದ್ರಚೂಡ್ ಅವರನ್ನು ಹೊರತುಪಡಿಸಿ, ತೀರ್ಪು ನೀಡಿದ ಪೀಠದಲ್ಲಿದ್ದ ಎಲ್ಲರೂ ನಿವೃತ್ತರಾಗಿದ್ದಾರೆ. ಗೊಗೋಯ್ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ಅಬ್ದುಲ್ ನಝೀರ್ ಅವರು ಆಂಧ್ರ ಪ್ರದೇಶದ ರಾಜ್ಯಪಾಲರಾಗಿದ್ದಾರೆ.

Join Whatsapp