ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಿರುಪತಿಗೆ ಹೊರಟಿದ್ದ ಐವರು ಮೃತ್ಯು

Prasthutha|

ಪ್ರಕಾಶಂ(ಆಂಧ್ರಪ್ರದೇಶ): ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಐವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಂಭಂ ಬಳಿ ಸಂಭವಿಸಿದೆ.

- Advertisement -

ಪಲ್ನಾಡು ಜಿಲ್ಲೆಯ ವೆಲ್ದುರ್ತಿ ತಾಲೂಕಿನ ಸಿರಿಗಿರಿಪಾಡು ನಿವಾಸಿಗಳಾದ ಅನಿಮಿ ರೆಡ್ಡಿ (60), ಗುರವಮ್ಮ (60), ಅನಂತಮ್ಮ (55), ಆದಿಲಕ್ಷ್ಮಿ (58) ಮತ್ತು ನಾಗಿರೆಡ್ಡಿ (24)ಮೃತಪಟ್ಟವರು.

ಮಾಚರ್ಲದಿಂದ ತಿರುಪತಿಗೆ ಐವರು ಕಾರಿನಲ್ಲಿ ವೇಗವಾಗಿ ಹೋಗುತ್ತಿದ್ದಾಗ ಮಾರ್ಗ ಮಧ್ಯದ ಕಂಭಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

- Advertisement -

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟು ಕಾರು ಸಂಪೂರ್ಣ ಜಖಂಗೊಂಡಿದೆ. ಸುದ್ದಿ ತಿಳಿ ತಕ್ಷಣವೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp