ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಭೀಕರ ಅಪಘಾತ: ಐವರು ಮೃತ್ಯು

Prasthutha|

ಗದಗ: ಕೆಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

- Advertisement -


ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.


ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.