Home ಟಾಪ್ ಸುದ್ದಿಗಳು ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಭೀಕರ ಅಪಘಾತ: ಐವರು ಮೃತ್ಯು

ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಭೀಕರ ಅಪಘಾತ: ಐವರು ಮೃತ್ಯು

ಗದಗ: ಕೆಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ.


ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.


ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Join Whatsapp
Exit mobile version