Home ಟಾಪ್ ಸುದ್ದಿಗಳು ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐವರು ಸಜೀವದಹನ

ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಐವರು ಸಜೀವದಹನ

ಲಕ್ನೋ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಕಾರ್-ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ.


ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಇದು ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಡಿಕ್ಕಿ ಹೊಡೆದ ನಂತರ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಪಘಾತದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.


ಪೊಲೀಸರ ಪ್ರಕಾರ, ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕಾರಿನೊಳಗೆ ಸಜೀವ ದಹನವಾಗಿದ್ದಾರೆ.

Join Whatsapp
Exit mobile version