ಶಿರಸಿ: ಕೆಎಸ್ ಆರ್ ಸಿಟಿ ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಶಿರಸಿ ತಾಲೂಕಿನ ಬಂಡಲ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಸಿಟಿ ಬಸ್ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.