ಬಸ್- ಲಾರಿ ಮಧ್ಯೆ ಭೀಕರ ಅಪಘಾತ: ಐವರು ಮೃತ್ಯು

Prasthutha|

ಚಿತ್ರದುರ್ಗ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ನಡೆದಿದೆ.

- Advertisement -


ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) ಮಸ್ಕಿ ಮೂಲದ ರಮೇಶ್ (40) ಹಾಗೂ ಮಾಬಮ್ಮ (35) ಎಂದು ಗುರುತಿಸಲಾಗಿದೆ. ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ.
ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತಿತ್ತು. ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಹಾಗೂ ಆಸ್ಪತ್ರೆಯಲ್ಲಿ ಒಬ್ಬ ಗಾಯಾಳು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.


ಬಸ್ನಲ್ಲಿದ್ದ ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp