ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ಭೀಕರ ಬಿರುಗಾಳಿಯ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ.
ಐದು ಮಂದಿ ಮೃತಪಟ್ಟಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಿರುಗಾಳಿಯ ಪ್ರಭಾವದಿಂದ ಹಲವಾರು ಮನೆಗಳು ಮತ್ತು ಮರಗಳು ನೆಲಸಮಗೊಂಡಿವೆ. ಗಾಯಾಳುಗಳನ್ನು ಜಲ್ ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಪತ್ತು ಸಂಭವಿಸಿದೆ. ಇದರ ಪರಿಣಾಮವಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಪ್ರಸ್ತುತ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.