ಚೆನ್ನೈ : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸತತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ (ನವೆಂಬರ್ 11) ರೆಡ್ ಅಲರ್ಟ್ ಘೋಷಿಸಿದೆ.
ಮಂಗಳವಾರ ಮಧ್ಯಾಹ್ನ ಬುಲೆಟಿನ್ ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯು ಅದರಲ್ಲಿ, ‘ತಮಿಳುನಾಡಿನ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಹಾಗೂ ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ’ ಎಂದು ತಿಳಿಸಿದೆ.
ರಾಜ್ಯಾದ್ಯಂತ ಮಳೆ ಹಾಗೂ ಮಳೆಯಿಂದ ಉಂಟಾದ ಸಮಸ್ಯೆಯಿಂದಾಗಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. 538 ಗುಡಿಸಲುಗಳು ಮತ್ತು ನಾಲ್ಕು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.