ಬಿಹಾರ: ವಿಷಪೂರಿತ ಮದ್ಯಸೇವಿಸಿ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ನಳಂದಾದಲ್ಲಿ ನಡೆದಿದೆ.
ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಪಹಾಡಿ ಮತ್ತು ಪಹಾಡ್ ತಲ್ಲಿ ಎಂಬ ಗ್ರಾಮಗಳಲ್ಲಿ ಘಟನೆ ನಡೆದಿದ್ದು, ಐವರು ಸಾವನ್ನಪ್ಪಿರುವುದು ಮಾತ್ರವಲ್ಲದೇ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಮದ್ಯ ಸೇವನೆ ಮಾಡಿ, ಆರೋಗ್ಯ ಹದಗೆಟ್ಟು ಸಾವನ್ನಪ್ಪಿರುವುದಾಗಿ ಸಂಬಂಧಿಗಳು ಸ್ಪಷ್ಟನೆ ನೀಡಿದ್ದಾರೆ.