Home ಟಾಪ್ ಸುದ್ದಿಗಳು ಮನೆಯಲ್ಲಿ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರ ಸಜೀವದಹನ

ಮನೆಯಲ್ಲಿ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರ ಸಜೀವದಹನ

ಜೈಪುರ: ರಾಜಸ್ಥಾನದ ಜೈಪುರದ ಮನೆಯೊಂದರಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕುಟುಂಬದ ಐವರು ಸಜೀವದಹನವಾಗಿದ್ದಾರೆ.


ಅಪಘಾತದಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ವಿಶ್ವಕರ್ಮ ಪೊಲೀಸ್ ಠಾಣೆ ವ್ಯಾಪ್ತಿಯ ಜೈಸಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಮೃತರೆಲ್ಲರೂ ಬಿಹಾರ ನಿವಾಸಿಗಳು. ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ದಳದ ವಾಹನಗಳು ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತಂದರು. ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು, ಇದರಿಂದಾಗಿ ಮನೆಯಿಂದ ಯಾರಿಗೂ ಹೊರಬರಲಾಗಲಿಲ್ಲ. ಸದ್ಯ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.

Join Whatsapp
Exit mobile version