Home ಟಾಪ್ ಸುದ್ದಿಗಳು ಕಂಟೈನರ್ ಗೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರು ಮೃತ್ಯು

ಕಂಟೈನರ್ ಗೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರು ಮೃತ್ಯು

ಲಕ್ನೋ: ಕಂಟೈನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮುಂಡರ್ವಾ ಪ್ರದೇಶದ ಖಜೌಲಾ ಪೊಲೀಸ್ ಹೊರ ಠಾಣೆಯ ಬಳಿ ನಡೆದಿದೆ.

ಭಾನುವಾರ ಸಂಜೆ ಲಕ್ನೋ-ಗೋರಖ್ಪುರ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಎಲ್ಲಾ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಟ್ರಕ್ ನಲ್ಲಿ ಸಿಲುಕಿದ್ದ ಕಾರನ್ನು ಹೊರತೆಗೆದಿದ್ದಾರೆ. ಎಲ್ಲಾ ಶವಗಳನ್ನು ಶವಾಗಾರಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಸ್ಥರು ಆಗಮಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಬಸ್ತಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.

Join Whatsapp
Exit mobile version