ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಮೃತ್ಯು

Prasthutha|

ರಾಮನಗರ: ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ನಡೆದಿದೆ.

- Advertisement -


ಕಾರು ಮಾಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ.


ಘಟನೆಯ ಬಳಿಕ ಮೃತದೇಹಗಳನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕುದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp