ಒಂದೇ ಕುಟುಂಬದ ಐವರ ಸಾವು ; ಕಂಬನಿ ಮಿಡಿದ ಸಚಿವ ಕಾರಜೋಳ

Prasthutha: October 23, 2021

ಬೆಳಗಾವಿ : ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾಜಿ ಯೋಧನೊಬ್ಬ ತನ್ನ ಕುಟುಂಬದ ಸದಸ್ಯರಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.


ಬ್ಲ್ಯಾಕ್ ಫಂಗಸ್ ಸೋಂಕಿನಿಂದ ತನ್ನ ಪತ್ನಿಯನ್ನು ಕಳೆದುಕೊಂಡಿದ್ದ ಇವರು ನಾಲ್ಕು ಮಕ್ಕಳಿಗೆ ವಿಷ ಪ್ರಾಶನ ಮಾಡಿ ತಾನೂ ದಾರುಣವಾಗಿ ಸತ್ತಿರುವುದು ಮನಕಲಕುತ್ತದೆ ಎಂದು ಶೋಕ ವ್ಯಕ್ತಪಡಿಸಿರುವ ಸಚಿವ ಕಾರಜೋಳ, ಎಂತಹ ಪರಿಸ್ಥಿತಿಯಲ್ಲೂ ಡಿಪ್ರೆಶನ್ ಗೆ ಒಳಗಾಗಿ ಜೀವ ಕಳೆದುಕೊಳ್ಳದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!