ಅಸ್ಸಾಂ: ಗರ್ಭಿಣಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ಗುಂಪು

Prasthutha|

ದಿಬ್ರುಗಢ : ಐದು ತಿಂಗಳ ಗರ್ಭಿಣಿ ಶಿಕ್ಷಕಿಯೊಬ್ಬರ ಮೇಲೆ ವಿದ್ಯಾರ್ಥಿಗಳು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಅಸ್ಸಾಂನ ದಿಬ್ರುಗಢ ಜಿಲ್ಲೆಯಲ್ಲಿ ನಡೆದಿದೆ.   

ಗರ್ಭಿಣಿ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಕಳಪೆ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆಯ ಕುರಿತು ಪೋಷಕರ ಗಮನಕ್ಕೆ ತಂದ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

- Advertisement -

ಮೋರನ್ ಪ್ರದೇಶದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿರುವುದು ತಿಳಿದುಬಂದಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆ ಬಗ್ಗೆ ಪೋಷಕರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಲಾಗಿತ್ತು. ಇದೇ ವೇಳೆ ವಿದ್ಯಾರ್ಥಿಗಳ ನಡವಳಿಕೆ ಬಗ್ಗೆ ಪೋಷಕರಿಗೆ ಶಿಕ್ಷಕಿ ದೂರು ನೀಡಿದ್ದರು.

ಸಭೆ ಮುಗಿದ ಬಳಿಕ ಕೆಲವು ವಿದ್ಯಾರ್ಥಿಗಳು ಗುಂಪುಗೂಡಿ ಗರ್ಭಾವಸ್ಥೆಯಲ್ಲಿದ್ದ ಶಿಕ್ಷಕಿಯ ತಲೆಗೂದಲನ್ನು ಹಿಡಿದು ಎಳೆದಾಡಿದ್ದು, ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿಯನ್ನು ಶಾಲಾ ಸಿಬ್ಬಂದಿಗಳು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -