ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಬೆನ್ನಲ್ಲೇ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದರು. ಇದೀಗ ಭಾರತ ತಂಡದ ಆಲ್ ರೌಂಡರ್ ಕೂಡ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐವರು ಆಟಗಾರರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಈ ಐವರಲ್ಲಿ ಮೂವರು ಭಾರತೀಯರು ಎಂಬುದು ವಿಶೇಷ.
ವಿರಾಟ್ ಕೊಹ್ಲಿ: ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಗೆ ನಿವೃತ್ತಿ ಘೋಷಿಸಿದ್ದಾರೆ.
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಟಿ20 ಇಂಟರ್ನ್ಯಾಷನಲ್ ಕೆರಿಯರ್ ಗೆ ವಿದಾಯ ಹೇಳಿದ್ದಾರೆ.
ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ.
ಡೇವಿಡ್ ವಾರ್ನರ್: ಈ ಬಾರಿಯ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತದಿಂದ ಹೊರಬಿದ್ದ ಬೆನ್ನಲ್ಲೇ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಟ್ರೆಂಟ್ ಬೌಲ್ಟ್: ನ್ಯೂಝಿಲೆಂಡ್ ತಂಡದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.