ಹೊಸದಿಲ್ಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.
ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 87 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 147 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಮೇ. 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.
ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 99 ಸ್ಥಾನಗಳಲ್ಲಿ, ಯುಡಿಎಫ್ 40 ರಲ್ಲಿ ಮತ್ತು ಎನ್ ಡಿಎ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ :ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ 205 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಹಿನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.
ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಂಶ :ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಪಿಎ ಮೈತ್ರಿಕೂಟ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ : ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರವಾಗಿದ್ದು, ಆರಂಭಿಕ ಹಂತದಲ್ಲಿ ಯುಪಿಎ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್ ಡಿಎ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.