ಪಂಚರಾಜ್ಯ ಚುನಾವಣೆ ಫಲಿತಾಂಶ : ಯಾವ ರಾಜ್ಯದಲ್ಲಿ, ಯಾವ ಪಕ್ಷಕ್ಕೆ ಮುನ್ನಡೆ? ಇಲ್ಲಿದೆ ಮಾಹಿತಿ

Prasthutha|

ಹೊಸದಿಲ್ಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 91 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ ಮತ್ತು ಎನ್ ಡಿಎ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ :ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಟಿಎಂಸಿ 176 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 108 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಹಿನ್ನಡೆಯಾಗಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಂಶ :ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಪಿಎ ಮೈತ್ರಿಕೂಟ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 104 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 129 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಡಿಸಿಎಂ ಪನ್ನೀರ ಸೇಲ್ವಂ ಹಿನ್ನಡೆ ಅನುಭವಿಸಿದ್ದಾರೆ.

ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ : ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರವಾಗಿದ್ದು, ಆರಂಭಿಕ ಹಂತದಲ್ಲಿ ಯುಪಿಎ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್ ಡಿಎ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -