ಪಂಚರಾಜ್ಯ ಚುನಾವಣೆ: ಸಮಾಜವಾದಿ ಪಕ್ಷದವರು ಪಾಕಿಸ್ಥಾನದ ಜಿನ್ನಾ ಆರಾಧಕರು ಎಂದ ಆದಿತ್ಯನಾಥ್

Prasthutha: January 28, 2022

ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷಗಳು ಪರಸ್ಪರ ಟೀಕಾಪ್ರಹಾರ ನಡೆಸುತ್ತಿವೆ. ಸಮಾಜದವಾದಿ ಪಕ್ಷದವರು ಪಾಕಿಸ್ಥಾನದ ಜಿನ್ನಾನ ಆರಾಧಕರು ಎಂದು ಟ್ವೀಟ್‌ ಮಾಡಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಾಗ್ದಾಳಿ ನಡೆಸಿದ್ದಾರೆ.

ಸಮಾಜವಾದಿ ಪಕ್ಷದವರು ಜಿನ್ನಾ ಆರಾಧಕರು, ಆದರೆ ನಾವು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಆರಾಧಕರು. ಪಾಕಿಸ್ತಾನ ಅವರಿಗೆ ಪ್ರಿಯವಾಗಿದೆ. ನಾವು ಭಾರತ ಮಾತೆಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್‌ ಆಲಿ ಜಿನ್ನಾರನ್ನು ಉಲ್ಲೇಖಿಸಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವದಲ್ಲಿ ಸಿಎಂ ಆದಿತ್ಯನಾಥ್‌ ಅವರು ಧ್ರುವೀಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲ ದಿನಗಳ 80 ವರ್ಸಸ್‌ 20 ಅಂದರೆ ಹಿಂದೂ ಮತ್ತು ಮುಸ್ಲಿಂ ಮತದಾರರು ಎಂದು ಹೇಳಿಕೆ ನೀಡಿದ್ದರು. ಶೇ.80 ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!