ಇಂದು 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

Prasthutha|

ಹೊಸದಿಲ್ಲಿ : ದೇಶದೆಲ್ಲೆಡೆ ವಿಧಾಸಭಾ ಚುನಾವಣೆಯ ಬಿಸಿ ಕಾವೇರುತ್ತಿದ್ದು, ರಾಜಕೀಯ ನಾಯಕರು ಐದು ರಾಜ್ಯಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಚುನಾವಣಾ ಆಯೋಗ ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ ಮಾಡಲಿದೆ ಎಂದು ತಿಳಿದು ಬಂದಿದೆ.

- Advertisement -

ಚುನಾವಣಾ ಆಯೋಗ ಇಂದು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಗೆ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಏಪ್ರಿಲ್-ಮೇ ತಿಂಗಳಲ್ಲಿ ಐದು ರಾಜ್ಯಗಳ ಚುನಾವಣೆ ನಡೆಯಲಿದೆ.

ಬಿಹಾರ ಚುನಾವಣೆ ನಂತರ ಕೊರೋನಾ ಸಾಂಕ್ರಾಮಿಕ ರೋಗದ ನಡುವೆಯೇ ನಡೆಯುವ ಮೊದಲ ಚುನಾವಣೆ ಇದಾಗಿದೆ.

- Advertisement -

ಇದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಗೂ ಚುನಾವಣಾ ಆಯೋಗವು ಇಂದು ದಿನಾಂಕ ಪ್ರಕಟಿಸಲಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಯ ಕಾವು ರಂಗೇರಲಿದೆ.

Join Whatsapp