Home ಟಾಪ್ ಸುದ್ದಿಗಳು ಪ್ರೀತಂ ಗೌಡ ಭಾವಚಿತ್ರವಿದ್ದ ಫ್ಲೆಕ್ಸ್’ಗಳಿಗೆ ಬೆಂಕಿ

ಪ್ರೀತಂ ಗೌಡ ಭಾವಚಿತ್ರವಿದ್ದ ಫ್ಲೆಕ್ಸ್’ಗಳಿಗೆ ಬೆಂಕಿ

►ಜೆಡಿಎಸ್ -ಬಿಜೆಪಿ ಕಾರ್ಯಕರ್ತರ ಫೈಟ್

ಮಂಡ್ಯ: ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.


ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ ನಲ್ಲಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಫ್ಲೆಕ್ಸ್ಗೆ ಪೆಟ್ರೋಲ್ ಸುರಿದು ಅದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಿಜೆಪಿ, ಜೆಡಿಎಸ್ ನಾಯಕರನ್ನ ಸ್ವಾಗತಿಸಲು ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್ ಗಳಲ್ಲಿ ಪ್ರೀತಂ ಫೋಟೋ ಹಾಕಿದ್ದಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.


ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಮತ್ತೊಂದೆಡೆ ಪ್ರೀತಂ ಪರವಾಗಿ ಬೆಂಬಲಿಗರು ಘೋಷಣೆ ಕೂಗಿದ್ದರು. ಇದರಿಂದ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಹೋಗಿತ್ತು. ಇದೀಗ ಮಾಜಿ ಶಾಸಕ ಪ್ರೀತಂ ಭಾವಚಿತ್ರವಿದ್ದ ಫ್ಲೆಕ್ಸ್ ಗಳಿಗೆ ಬೆಂಕಿ ಇಡಲಾಗಿದೆ.

Join Whatsapp
Exit mobile version