ನವದೆಹಲಿ : ಕೋವಿಡ್ ಪ್ರಕರಣಗಳು ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ಸಾಗರೋತ್ತರ ವಿಮಾನಗಳ ನಿಷೇಧವನ್ನು ಜೂ. 30ರ ವರೆಗೆ ವಿಸ್ತರಿಸಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲನ ನಿಷೇಧವನ್ನು ಕೇಂದ್ರ ಸರಕಾರ ಜೂ.೩೦ರ ವರೆಗೆ ವಿಸ್ತರಿಸಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಆದಾಗ್ಯೂ, ಕೋವಿಡ್ ಸಂಬಂಧಿತ ಅಂತಾರಾಷ್ಟ್ರೀಯ ಸರಕು ಕಾರ್ಯಾಚರಣೆಗಳು, ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಕ್ಷಮ ಪ್ರಾಧಿಕಾರವು ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳಿಗೆ ಸಂಬಂಧಿಸಿದಂತೆ ಮೇಲೆ ಉಲ್ಲೇಖಿಸಿದ ವಿಷಯದ ಮೇಲೆ ಹೊರಡಿಸಲಾದ ಸುತ್ತೋಲೆಯ ಸಿಂಧುತ್ವವನ್ನು ಜೂ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಸುತ್ತೋಲೆಯಲ್ಲಿ ತಿಳಿಸಲಾಗಿದೆ.