ರಷ್ಯಾದ ಕರಾವಳಿ ತೀರದಲ್ಲಿ ವಿಮಾನ ಪತನ| ಮೃತದೇಹಗಳು ಪತ್ತೆ

Prasthutha: July 7, 2021

ಮಾಸ್ಕೊ: ರಷ್ಯಾದ ಪೂರ್ವ ಕರಾವಳಿ ತೀರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದ ಆಂಟೊನೊವ್ ಎಎನ್ 26 ವಿಮಾನದಲ್ಲಿದ್ದ 19 ಪ್ರಯಾಣಿಕರು ಮತ್ತು ಸಿಬ್ಬಂದಿಯ ಮೃತದೇಹಗಳು ಬುಧವಾರ ಪತ್ತೆಯಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 28 ಜನರಿದ್ದ ವಿಮಾನವು ಮಂಗಳವಾರ ಪಲಾನಾಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲೇ ಕೆಟ್ಟ ಹವಾಮಾನದ ಕಾರಣ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿತ್ತು.

ವಿಮಾನದಲ್ಲಿನ ಸಿಬ್ಬಂದಿ ಮತ್ತು ಪ್ರಯಾಣಿಕರಲ್ಲಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ. ಸಾವಿಗೀಡಾದವರಲ್ಲಿ ಪಲಾನಾದ ಸ್ಥಳೀಯ ಸರ್ಕಾರದ ಮುಖ್ಯಸ್ಥ ಓಲ್ಗಾ ಮೊಖಿರೇವಾ ಅವರೂ ಇದ್ದಾರೆ ಎಂದು ಕಮ್ಚಟ್ಕಾ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ರಷ್ಯಾದ ಪೂರ್ವ ಕರಾವಳಿಯ ಬಂಡೆಗಳ ಪ್ರದೇಶದಲ್ಲಿ ವಿಮಾನದ ಭಗ್ನಾವೇಷಗಳು ಮಂಗಳವಾರ ಸಂಜೆ ಪತ್ತೆಯಾಗಿವೆ. ಅಪಘಾತಕ್ಕೀಡಾದ ಸ್ಥಳದಲ್ಲಿ ಕತ್ತಲೆ ಇದ್ದುದ್ದರಿಂದ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ