ವಿಮಾನದಲ್ಲಿ ಧೂಮಪಾನ ಆರೋಪ: ಪ್ರವೀಣ್ ಕುಮಾರ್ ವಿರುದ್ಧ ಕೇಸ್ ದಾಖಲು

Prasthutha|

- Advertisement -

ಬೆಂಗಳೂರು: ಅಹಮದಾಬಾದ್‌ ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರಯಾಣಿಕನ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವೀಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಪ್ರವೀಣ್‌ಕುಮಾರ್, ಆಕಾಶ ಏರ್‌ಲೈನ್ಸ್ ಸಂಸ್ಥೆಯ ಕ್ಯೂಪಿ-1326 ವಿಮಾನದಲ್ಲಿ ಮಂಗಳವಾರ ಮಧ್ಯಾಹ್ನ 1.10ಕ್ಕೆ ಅಹಮದಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದರು. ಅವರು ಮಾರ್ಗ ಮಧ್ಯೆ ವಿಮಾನದಲ್ಲಿ ಧೂಮಪಾನ ಮಾಡಿ ಏರ್‌ಕ್ರಟಾ ನಿಯಮ-25, ಸಹ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆ ನಿಯಮ ಉಲ್ಲಂಘಿಸಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದೆ.

Join Whatsapp