ಪ್ರವಾಹ ಭೀತಿ: ಸ್ಥಳೀಯರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರಲು ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

- Advertisement -

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.

ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನ-ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕುಶಾಲನಗರ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರು ಕೋರಿದ್ದಾರೆ.



Join Whatsapp