ನವದೆಹಲಿ: ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಮುಂದಿನ 2-3 ದಿನಗಳ ಕಾಲ ಮಧ್ಯಪ್ರದೇಶ ಹಾಗೂ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ಮಾನ್ಸೂನ್ ಮಾರುತಗಳು ಸಕ್ರಿಯವಾಗಿರಲಿದ್ದು, ದೇಶದ ಮಧ್ಯ ಭಾಗದಲ್ಲಿ ಮಳೆಯ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಾಖಂಡ, ತ್ರಿಪುರ, ಮಿಜೋರಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜು.13ರವರೆಗೆ ಮಳೆ ಮುಂದುವರಿಯಲಿದೆ ಎಂದು ವರದಿ ಮಾಡಿದೆ
