ಭ್ರೂಣ ಪತ್ತೆ ಪ್ರಕರಣ: ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿದ ಆರೋಗ್ಯಾಧಿಕಾರಿ

Prasthutha|

 ಬೆಳಗಾವಿ: ಭ್ರೂಣ ಪತ್ತೆ  ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿ ಡಿಎಚ್ ಒ  ಮಹೇಶ್ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದಲ್ಲಿ ಇಲ್ಲಿನ ಸ್ಕ್ಯಾನಿಂಗ್ ಸೆಂಟರ್, ಆರು ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.

- Advertisement -

ದಾಳಿ ನಡೆದಂತಹ ಸಂದರ್ಭದಲ್ಲಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ವೈದ್ಯೆ ಡಾ.ವೀಣಾ ಕಣಕರೆಡ್ಡಿ ಏಳು ಭ್ರೂಣಗಳು ತಾವೇ ಎಸೆದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.

ಆಸ್ಪತ್ರೆಯ ಪಾಮೋಲಿನನಲ್ಲಿ ಭ್ರೂಣಗಳನ್ನು ರಕ್ಷಣೆ ಮಾಡಿ ಬಾಟಲ್ ನಲ್ಲಿ ಇಡಲಾಗಿತ್ತು. ಅಧಿಕಾರಿಗಳ ದಾಳಿಗೆ ಹೆದರಿ ಹಳೆಯ ಆಸ್ಪತ್ರೆಯಿಂದ ಹೊಸ ಆಸ್ಪತ್ರೆಗೆ ಶಿಫ್ಟ್ ಆಗುವಾಗ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯ ಸಿಬ್ಬಂದಿ ಬಳಿ ಭ್ರೂಣಗಳನ್ನು ಎಸೆಯಲು ಕೊಟ್ಟಿದ್ದಾರೆ. ವೆಂಕಟೇಶ ಆಸ್ಪತ್ರೆ ಸಿಬ್ಬಂದಿ ಅವುಗಳನ್ನು ತೆಗೆದುಕೊಂಡು ಹೋಗಿ ಜೂ.23ರಂದು ಹಳ್ಳದಲ್ಲಿ ಎಸೆದಿರುವುದಾಗಿ ವೈದ್ಯೆ ಡಾ.ವೀಣಾ ಕಣಕರೆಡ್ಡಿ ತಪ್ಪು ಒಪ್ಪಿಕೊಂಡಿದ್ದಾರೆ. 

- Advertisement -

ದಾಳಿ ವೇಳೆ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಹಾಗೂ ನವಜೀವನ ಆಸ್ಪತ್ರೆಗಳ ಕೈವಾಡ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಗಳನ್ನು ಡಿಎಚ್ಒ ಮಹೇಶ್ ಕೋಣಿ ಸೀಜ್ ಮಾಡಿದ್ದಾರೆ.

Join Whatsapp