ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ಪ್ರಕರಣ ಅತ್ಯಂತ ಹೇಯ, ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಅತ್ಯಂತ ಹೀನ, ಅಕ್ಷಮ್ಯ ಕೃತ್ಯ. ಈ ಕೃತ್ಯ ಮಾಡುವವರಿಗೆ ತಕ್ಕ ಪಾಠ, ಕಠಿಣ ಶಿಕ್ಷೆಯಾಗುವ ನಿಟ್ಟಿನಲ್ಲಿ ಕ್ರಮವಾಗಬೇಕು. ಭ್ರೂಣ ಹತ್ಯೆ ಮಾಡುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೇ ನಿರ್ದಾಕ್ಷಿಣ್ಯ ಕ್ರಮಕ್ಕೆ ನನ್ನ ಬೆಂಬಲ, ಒತ್ತಾಯವಿದೆ ಎಂದರು.