Home ಟಾಪ್ ಸುದ್ದಿಗಳು ಕೋವಿಡ್ ನಿಯಮ ಪಾಲಿಸಿ ಇಲ್ಲವೆ ಭಾರತ್ ಜೋಡೊ ಯಾತ್ರೆ ನಿಲ್ಲಿಸಿ: ಕೇಂದ್ರ ಸೂಚನೆ

ಕೋವಿಡ್ ನಿಯಮ ಪಾಲಿಸಿ ಇಲ್ಲವೆ ಭಾರತ್ ಜೋಡೊ ಯಾತ್ರೆ ನಿಲ್ಲಿಸಿ: ಕೇಂದ್ರ ಸೂಚನೆ

ನವದೆಹಲಿ: ಕೋವಿಡ್–19 ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಿ ಇಲ್ಲವೇ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.


ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಈ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.


ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿತು. ಈ ವೇಳೆ ಹರಿಯಾಣದ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದು ಪಾದಯಾತ್ರೆ ಹಾಗೂ ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

Join Whatsapp
Exit mobile version