ನಿವೃತ್ತಿ ಘೋಷಿಸಿದ ಫುಟ್ ಬಾಲ್ ಲೆಜೆಂಡ್ ಸುನಿಲ್ ಛೆಟ್ರಿ

Prasthutha|

ಭಾರತೀಯ ಫುಟ್ ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ ಬಾಲ್ ನಿಂದ ನಿವೃತ್ತಿ ಘೋಷಿಸಿದ್ದಾರೆ.

- Advertisement -


ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ ನ್ಯಾಷನಲ್ ಫುಟ್ ಬಾಲ್ ಗೆ ವಿದಾಯ ಹೇಳುವುದಾಗಿ ಛೆಟ್ರಿ ತಿಳಿಸಿದ್ದಾರೆ. 39 ವರ್ಷ ವಯಸ್ಸಿನ ಸುನಿಲ್, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.



Join Whatsapp