ಮುಜರಾಯಿ ದೇವಸ್ಥಾನಗಳಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಕೈಬಿಡಲು ಒತ್ತಾಯ

Prasthutha|

ಬೆಂಗಳೂರು: ಮುಜರಾಯಿ ಇಲಾಖೆಗೆ ವ್ಯಾಪ್ತಿಯ ದೇವಸ್ಥಾನಗಳ ಕಾರ್ಯ ನಿರ್ವಹಿಸಲು ಪ್ರತ್ಯೇಕವಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ.

- Advertisement -

ಒಕ್ಕೂಟದ ಪ್ರಧಾನ ಸಲಹೆಗಾರ ಡಾ. ಕೆ.ಇ. ರಾಧಾಕೃಷ್ಣ ನೇತೃತ್ವದ ನಿಯೋಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ದೇವಾಲಯಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಬದಲು, ಅವುಗಳನ್ನು ಇಲಾಖೆ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಗ್ರಾಮಾಂತರ ಪ್ರದೇಶಗಳಲ್ಲಿನ ‘ಸಿ’ ವರ್ಗದ ದೇವಾಲಯಗಳ ತಸ್ತಿಕ್ ಮೊತ್ತವನ್ನು 5 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು. ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳ ಅರ್ಚಕರು ಹಾಗೂ ನೌಕರರ ವೇತನವನ್ನು ಆಯಾ ದೇವಾಲಯಗಳ ಒಟ್ಟು ವಾರ್ಷಿಕ ವರಮಾನದ ಶೇ. 35 ಮೀರಬಾರದು ಎಂಬ ಹಳೆಯ ಆದೇಶವನ್ನು ಪರಿಷ್ಕರಿಸಿ ಶೇ. 50ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆಯೂ ಕೋರಲಾಗಿದೆ.

Join Whatsapp