ವಿದೇಶಿ ಡ್ರಗ್ಸ್ ಪೆಡ್ಲರ್ ಸೆರೆ; 20ಲಕ್ಷ ಮೌಲ್ಯದ ಮಾಲು ವಶ

Prasthutha|

ಬೆಂಗಳೂರು : ಡ್ರಗ್ಸ್ ಮಾರಾಟ ಸರಬರಾಜು ಸೇವನೆ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿ 20ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -


ಗೋವಾದಿಂದ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಬಂಧಿತ ನೈಜೀರಿಯಾ ಪ್ರಜೆಯಿಂದ 20 ಲಕ್ಷ ಮೌಲ್ಯದ 200 ಎಂಡಿಎಂಎ ಎಕ್ಸೆಟೆನ್ಸಿ ಮಾತ್ರೆಗಳು, 100 ಎಂಡಿಎಂಎ ಕ್ರಿಸ್ಟೆಲ್, ಮೊಬೈಲ್ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.


ಆರೋಪಿಯು ಗೋವಾದ ಡ್ರಗ್ಸ್ ಪೆಡ್ಲರ್ ನೊಬ್ಬನನ್ನು ಪರಿಚಯ ಮಾಡಿಕೊಂಡಿದ್ದು ಆತ ಪೋಲೆಂಡ್ ದೇಶದಿಂದ ಅಂಚೆ ಮೂಲಕ ಡ್ರಗ್ಸ್ ತರಿಸಿಕೊಂಡು ದೇಶದ ವಿವಿಧ ನಗರಗಳ ಉಪ ಡ್ರಗ್ ಪೆಡ್ಲರ್ ಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ.

- Advertisement -

ಆತನಿಂದ ಬಂಧಿತ ಆರೋಪಿಯು ಡ್ರಗ್ಸ್ ತರಿಸಿಕೊಂಡು ನಗರದ ಐಟಿ ಉದ್ಯೋಗಿಗಳಿಗೆ, ವಿದ್ಯಾರ್ಥಿಗಳನ್ನೇ ಗುರಿ ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.


ರಾಮಮೂರ್ತಿನಗರದಲ್ಲಿ ಡ್ರಗ್ಸ್ ಪೆಡ್ಲರ್ ನೈಜೀರಿಯಾ ಪ್ರಜೆಯು ಮಾದಕವಸ್ತುಗಳನ್ನು ಮಾರಾಟ ಮಾಡುವ ಬಗ್ಗೆ ಬಂದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಿ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ ಎಂದರು.

Join Whatsapp