Home ಟಾಪ್ ಸುದ್ದಿಗಳು ಬೆಂಗಳೂರು: ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಬೆಂಗಳೂರು: ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಬೆಂಗಳೂರು: ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಜರೀನಾ ಮೃತ ಮಹಿಳೆ.


ನಾಲ್ಕು ದಿನದ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್ ನ ಸೆಕೆಂಡ್ ಪ್ಲೋರ್ ನ ಕೊಠಡಿಯೊಂದರಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆ ಬಂದಿರಲಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.

Join Whatsapp
Exit mobile version