Home ಟಾಪ್ ಸುದ್ದಿಗಳು ರಾಜ್ಯಕ್ಕೆ ವಿಧಿವಿಜ್ಞಾನ ವಿಶ್ವವಿದ್ಯಾಲಯ ಮಂಜೂರು: ಆರಗ ಜ್ಞಾನೇಂದ್ರ

ರಾಜ್ಯಕ್ಕೆ ವಿಧಿವಿಜ್ಞಾನ ವಿಶ್ವವಿದ್ಯಾಲಯ ಮಂಜೂರು: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.


ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಒಳಾಡಳಿತ ಇಲಾಖೆ) ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಿತೇಂದ್ರ , ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಲತಾ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಗರಾಜ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.


ಪ್ರಸ್ತಾವಿತ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸೂಕ್ತವಾದ ಜಮೀನು ಅಗತ್ಯವಿದ್ದು, ಅದರ ಲಭ್ಯತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.
ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಮಂಜೂರು ಮಾಡುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಆರಗ ಜ್ಞಾನೇಂದ್ರ ಮನವಿ ಮಾಡಿದ್ದರು.

Join Whatsapp
Exit mobile version