ಎತ್ತಿನಹೊಳೆ ಯೋಜನೆ: 500 ಎಕರೆ ಭೂಮಿ ನೀಡಲು ಅರಣ್ಯ ಇಲಾಖೆ ಒಪ್ಪಿಗೆ; ಡಿಸಿಎಂ

Prasthutha|

ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು.

- Advertisement -


ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಇಂದು ಚರ್ಚೆ ಮಾಡಿದ್ದೇವೆ.


ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಹೇಳಿದರು.

Join Whatsapp
Exit mobile version