ಕಾಫಿಗಿಡಗಳನ್ನು ಕಡಿದು ಹಾಕಿದ ಅರಣ್ಯ ಇಲಾಖೆ: ರೈತರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Prasthutha|

ಚಿಕ್ಕಮಗಳೂರು: ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಚಿಕ್ಕಮಗಳೂರು ತಾಲೂಕಿನ ಕಡಬಗೆರೆಯಲ್ಲಿ ರಾಜ್ಯ ಹೆದ್ದಾರಿ ತಡೆದು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಮಳೆಯನ್ನೂ ಲೆಕ್ಕಿಸದೇ ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿ ಸುಮಾರು ಅರ್ಧ ಗಂಟೆ ಕಾಲ ರಸ್ತೆ ತಡೆ ನಡೆಸಿದರು.

ರೈತರ ಪ್ರತಿಭಟನೆಯಲ್ಲಿ ಶಾಸಕ ರಾಜೇಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಭಾಗಿಯಾಗಿದ್ದರು.
ನಿನ್ನೆ ಪರದೇಶಪ್ಪನಮಠದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನೂರಾರು ಕಾಫಿ ಗಿಡಗಳನ್ನು ಏಕಾಏಕಿ ಕಡಿದಿದ್ದರು. ಇದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

- Advertisement -

ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು. ಕೊನೆಗೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Join Whatsapp