ಆನೆ ತುಳಿತಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮೃತ್ಯು

Prasthutha|

ಮೈಸೂರು: ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ವಾಚರ್ ಒಬ್ಬರು ಸಾವನ್ನಪ್ಪಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ದಡದಹಳ್ಳಿ ಹಾಡಿಯಲ್ಲಿ ನಡೆದಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯದಲ್ಲಿ ವಾಚರ್‌ ಆಗಿರುವ ಹಾಡಿ ನಿವಾಸಿ ಬೊಮ್ಮ ಮೃತಪಟ್ಟವರು.
ಬೊಮ್ಮ ಅವರು ಗಸ್ತಿನಲ್ಲಿದ್ದಾಗ ಕಾಡಾನೆ ಹಠಾತ್ ಎದುರಾಗಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ವೇಳೆ ಬೊಮ್ಮ ಕಂದಕಕ್ಕೆ ಬಿದ್ದಿದ್ದಾರೆ. ಅಲ್ಲಿಂದಲೇ ಆನೆ ಸೊಂಡಿಲಿನಿಂದ ಮೇಲಕ್ಕೆತ್ತಿ ಕಾಲಿನಿಂದ ತುಳಿದು ಹತ್ಯೆ ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಎಫ್’ಒ ರವಿಕುಮಾರ್ ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

Join Whatsapp