ಎಎಪಿಯ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ

Prasthutha|

ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಬುಧವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

- Advertisement -


ಈ ವರ್ಷದ ಏಪ್ರಿಲ್ ನಲ್ಲಿ ಎಎಪಿಗೆ ರಾಜೀನಾಮೆ ನೀಡಿ ಬಿಎಸ್ ಪಿ ಸೇರಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇಂದ್ರ ಏಜೆನ್ಸಿಗಳ ಭಯದಿಂದ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ಎಎಪಿ ಆರೋಪಿಸಿತ್ತು.

ರಾಜ್ ಕುಮಾರ್ ಆನಂದ್ ಅವರು ಏಪ್ರಿಲ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ನಂತರ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಗೆ ಸೇರಿದ್ದರು. ಈಗ ಬಿಜೆಪಿ ಸೇರಿದ್ದಾರೆ. ಈ ಬಾರಿ ರಾಜ್ಕುಮಾರ್ ಆನಂದ್ ಕೂಡ ಬಿಎಸ್ ಪಿ ಟಿಕೆಟ್ ನಲ್ಲಿ ನವದೆಹಲಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಗಳಿಸಿದ್ದು ಕೇವಲ 5629 ಮತಗಳು. ಈ ಕ್ಷೇತ್ರದಲ್ಲಿ ಬಿಜೆಪಿಯ ಬಾನ್ಸುರಿ ಸ್ವರಾಜ್ 78370 ಮತಗಳಿಂದ ಗೆದ್ದಿದ್ದಾರೆ.

Join Whatsapp